ಬೆಂಗಳೂರು: “ಇತರರ ಉಡುಗೊರೆಯನ್ನು ಮತ್ತೊಬ್ಬರಿಗೆ ನೀಡುವ ಪರಿಸ್ಥಿತಿ ನನಗೆ ಬಂದಿಲ್ಲ” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ.
ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅವರು ನೀಡಿದ ಬೆಳ್ಳಿ ಗಣೇಶಮುಖ ಪ್ರತಿಮೆ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ವರದಿಗಳು ಸುಳ್ಳು ಎಂದು ಹೇಳಿದ್ದಾರೆ.
ಕೆಲವು ವರದಿಗಳ ಪ್ರಕಾರ, ಆ ಪ್ರತಿಮೆಯನ್ನು ಬಿಜೆಪಿ ಶಾಸಕರೊಬ್ಬರು ತಂದಿದ್ದು, ಅದನ್ನು ಡಿ.ಕೆ. ಶಿವಕುಮಾರ್ ಅವರು ಪ್ರಧಾನಿಗೆ ನೀಡಿದರು ಎಂದು ಹೇಳಲಾಗಿತ್ತು. ಆದರೆ, ಇದನ್ನು ತಳ್ಳಿಹಾಕಿದ ಅವರು, “ಪ್ರತಿಮೆಯನ್ನು ನಾನು ನನ್ನ ಸ್ವಂತ ಹಣದಿಂದ ಖರೀದಿಸಿದ್ದೇನೆ. ಇಲಾಖೆಯ ಹಣವನ್ನು ಬಳಸಿಲ್ಲ. ಮನೆಯಿಂದ ತಂದದ್ದು, ಕಚೇರಿ ಸಿಬ್ಬಂದಿ ಮೂಲಕ ಪರಿಶೀಲನೆ ನಡೆದ ನಂತರವೇ ಪ್ರಧಾನಿಗೆ ನೀಡಲಾಯಿತು” ಎಂದು ಹೇಳಿದ್ದಾರೆ.
“ಸಾಮಾಜಿಕ ಜಾಲತಾಣಗಳಲ್ಲಿ ಹರಿಯುತ್ತಿರುವ ಈ ಮಾಹಿತಿ ಸತ್ಯಕ್ಕೆ ದೂರವಾದದ್ದು, ಸಂಪೂರ್ಣ ತಪ್ಪು.” ಎಂದರು.

